Mysore
25
light rain

Social Media

ಸೋಮವಾರ, 17 ಆಗಸ್ಟ್ 2026
Light
Dark

ರಾಜ್ಯಕ್ಕಿಂದು ರಾಜ್ಯಪಾಲರ ಆಗಮನ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಂದಿನ ಕ್ರಮ?

ಬೆಂಗಳೂರು: ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜುಲೈ.26ರಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಶೋಕಾಸ್‌ ನೋಟಿಸ್‌ ನೀಡಿ ದೆಹಲಿ ಪ್ರವಾಸ ಕೈಗೊಂಡಿದ್ದರು.

ಇದೀಗ ದೆಹಲಿ ಪ್ರವಾಸ ಮುಗಿಸಿದ ಬಳಿಕ ರಾಜ್ಯಪಾಲ ಗೆಹ್ಲೋಟ್‌ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಂದಿನ ಹೋರಾಟ ಕೈಗೊಳ್ಳುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.

ಇತ್ತ ಬಿಜೆಪಿ-ಜೆಡಿಎಸ್‌ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಾದಯಾತ್ರೆ ಆರಂಭಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಇದೀಗ ರಾಜ್ಯಪಾಲರು ಇಂದು ರಾಜ್ಯಕ್ಕೆ ವಾಪಸ್ಸಾಗಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸುವ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

Tags:
error: Content is protected !!