ಬೆಂಗಳೂರು: ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಜುಲೈ.26ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶೋಕಾಸ್ ನೋಟಿಸ್ ನೀಡಿ ದೆಹಲಿ ಪ್ರವಾಸ ಕೈಗೊಂಡಿದ್ದರು.
ಇದೀಗ ದೆಹಲಿ ಪ್ರವಾಸ ಮುಗಿಸಿದ ಬಳಿಕ ರಾಜ್ಯಪಾಲ ಗೆಹ್ಲೋಟ್ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಮುಂದಿನ ಹೋರಾಟ ಕೈಗೊಳ್ಳುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.
ಇತ್ತ ಬಿಜೆಪಿ-ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪಾದಯಾತ್ರೆ ಆರಂಭಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ಇದೀಗ ರಾಜ್ಯಪಾಲರು ಇಂದು ರಾಜ್ಯಕ್ಕೆ ವಾಪಸ್ಸಾಗಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸುವ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…
ತುಳುನಾಡಿನಲ್ಲಿ ಹುಟ್ಟಿ ಬೆಳೆದ ಎಚ್. ನಾಗವೇಣಿಯವರ ಕತೆಗಳಲ್ಲಿ ಕೂಡ ಈ ತಾಯ್ನೆಲದ ಮಣ್ಣಿನ ತುಡಿತ ಮಿಡಿತಗಳು ನರನಾಡಿಯಂತೆ ವ್ಯಾಪಿಸಿರುತ್ತವೆ. ಆ…
ಐಐಟಿ, ಐಐಎಂ, ಐಐಎಸ್‌ಪಿ, ಎನ್‌ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ. ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು…
ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಉಪನ್ಯಾಸಕ ಹುದ್ದೆಗಳು ಖಾಲಿ ಇದ್ದು, ಮುಖ್ಯಮಂತ್ರಿಗಳ ಅನುಮತಿ…
ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜಕುಟುಂಬದ…