Mysore
29
few clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

rain land slide s

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಸಂಜೆಯ ವೇಳೆಗೆ ಧಾರಾಕಾರ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನಿನ್ನೆ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.

Tags:
error: Content is protected !!