ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧೆಡೆ ನಿನ್ನೆಯೂ ಕೂಡ ಭಾರೀ ಮಳೆಯಾಗಿದ್ದು, ಇಂದು ಕೂಡ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಸನ ಹಾಗೂ ಕೊಡಗಿನಲ್ಲೂ ಭಾರೀ ಮಳೆಯಾಗಲಿದ್ದು, ಆ ಜಿಲ್ಲೆಗಳಿಗೂ ಕೂಡ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಜಿಲ್ಲೆಗಳ ಜೊತೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ ಬರುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರಬೇಕು. ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಮೀನುಗಳಲ್ಲಿ ಕೆಲಸ ಮಾಡುವ ರೈತರು ಬಹಳ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…