ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಗುಡುಗು ಸಹಿತ ಧಾರಾಕಾರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧೆಡೆ ನಿನ್ನೆಯೂ ಕೂಡ ಭಾರೀ ಮಳೆಯಾಗಿದ್ದು, ಇಂದು ಕೂಡ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಹಾಸನ ಹಾಗೂ ಕೊಡಗಿನಲ್ಲೂ ಭಾರೀ ಮಳೆಯಾಗಲಿದ್ದು, ಆ ಜಿಲ್ಲೆಗಳಿಗೂ ಕೂಡ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಜಿಲ್ಲೆಗಳ ಜೊತೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ ಬರುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆಯಿಂದ ಇರಬೇಕು. ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಮೀನುಗಳಲ್ಲಿ ಕೆಲಸ ಮಾಡುವ ರೈತರು ಬಹಳ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

4 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

5 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

11 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

12 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

12 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

12 hours ago