Mysore
22
broken clouds

Social Media

ಸೋಮವಾರ, 12 ಜನವರಿ 2026
Light
Dark

ಉತ್ತರ ಕನ್ನಡ ಜಿಲ್ಲೆಯ ೨ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ

ಮಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ೫ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ೨ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಹೊನ್ನಾವರ, ಕುಮಟಾ ಎರಡು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಶರಾವತಿ ಹಾಗೂ ಗುಂಡಬಾಳ ನದಿ ಉಕ್ಕಿಹರಿಯುತ್ತಿದೆ. ಇನ್ನು ಕಡತೋಕ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ೨೦ಕ್ಕೂ ಹೆಚ್ಚು ಜನರನ್ನ NDRF ತಂಡ ರಕ್ಷಣೆ ಮಾಡಿದೆ.

ಇನ್ನು ಜಿಲ್ಲೆಯಾದ್ಯಂತ ೮ ಕಾಳಜಿ ಕೇಂದ್ರ ತೆರೆಯಲಾಗಿದ್ದು, ೩೧೩ ಜನರಿಗೆ ಆಶ್ರಯ ನೀಡಲಾಗಿದೆ. ಮಳೆಯಿಂದಾಗಿ ೨ ಮನೆಗಳು ತೀವ್ರ ಹಾನಿಯಾಗಿದ್ದು, ೧೩ ಮನೆಗಳಿಗೆ ಭಾಗಶಃ ಹಾನಿಯಾಗಿದೆ.

Tags:
error: Content is protected !!