ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಂಪುಟ ಸಭೆ ನಿಗದಿಯಾಗಿದೆ.
ಇಂದು ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರೀ ಚರ್ಚೆಯಲ್ಲಿರುವ ಬೆನ್ನಲ್ಲೇ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.





