ಕೊಪ್ಪಳ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಬುಲ್ಡೋಟಾ ಸ್ಟೀಲ್ ಫ್ಯಾಕ್ಟರಿಯ ಆರಂಭದಿಂದ ಕೊಪ್ಪಳ ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ.
ಇಂದು ಕೊಪ್ಪಳ ಸ್ವಯಂಪ್ರೇರಿತ ಬಂದ್‌ಗೆ ಪರಿಸರ ಸಂರಕ್ಷಣಾ ಸಮಿತಿ ಕರೆ ನೀಡಿದ್ದು, ಕೊಪ್ಪಳ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇಂದಿನ ಬಂದ್‌ಗೆ 130 ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಫ್ಯಾಕ್ಟರಿ ಆರಂಭ ಮಾಡದಂತೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಹೋರಾಟದಲ್ಲಿ ಸಾವಿರಾರು ಜನರು ಭಾಗಿಯಾಗುವ ಸಾಧ್ಯತೆಯಿದೆ.
ಕೊಪ್ಪಳ ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹಲವು ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲೂ ಕೂಡ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಎಲ್ಲೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಇನ್ನು ಇಂದು ಸಂಜೆಯವರೆಗೂ ಕೊಪ್ಪಳ ಬಂದ್ ಆಗಲಿದ್ದು, ಜನತೆ ವ್ಯಾಪಾರ ಮಾಡಲು ಹೊರಗೆ ಬರುವ ಮುನ್ನ ಯೋಚನೆ ಮಾಡಬೇಕಿದೆ.





