Mysore
23
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ರಾಜ್ಯದಲ್ಲಿ ಇಂದು ಕೂಡ ಮುಂದುವರಿಯಲಿದೆ ಮಳೆ ಆರ್ಭಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 22 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

 

 

Tags:
error: Content is protected !!