Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಇಂದು ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಿದೆ : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು.

“ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ‌ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.

ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.

ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರು ಇವತ್ತಿನ ಪತ್ರಕರ್ತರಿಗೆ ಮಾದರಿ ಆಗಬೇಕು ಎಂದು ಆಶಿಸಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ತ್ರಿಲೋಕಚಂದ್ರ, ಕಂಠೀರವ ಸ್ಟುಡಿಯೊ ಅಧ್ಯಕ್ಷರಾದ ಅಯೂಬ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: