ದೆಹಲಿ: ಕೇರಳದ ವಯನಾಡಿನಲ್ಲಿ ಭೂಕುಸಿತ ಉಂಟಾಗಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿಂದು ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 12.15ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ವಿಪತ್ತಿನಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಪೀಡಿತರಿಗೆ ಪರಿಣಾಮಕಾರಿ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ಮೋದಿ ಅವರು, ಪುನರ್ವಸತಿ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 11 ಗಂಟೆಗೆ ಕಣ್ಣೂರಿಗೆ ಆಗಮಿಸಲಿದ್ದು, ಅಲ್ಲಿಂದ ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ. ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪರಿಹಾರ ಶಿಬಿರ ಮತ್ತು ಸ್ಥಳೀಯ ಆಸ್ಪತ್ರೆಗೂ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ