ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದು, ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಅರವಿಂದ ಲಿಂಬಾವಳಿ ಕೂಡ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.
ಇನ್ನು ಕಳೆದ ಕೆಲ ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿರುವ ಹಿನ್ನೆಲೆಯಲ್ಲಿ ನಾಳೆ ಮಾಜಿ ಸಚಿವ ಶ್ರೀರಾಮುಲು ಅವರು ಅಮಿತ್ ಶಾರನ್ನು ಭೇಟಿಯಾಗಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಇದರ ಜೊತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹ ಅಮಿತ್ ಶಾರನ್ನು ಭೇಟಿಯಾಗಲು ಪ್ಲಾನ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಮನವಿ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





