Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ನಾಳೆ(ಆ.17) ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್

ಮೈಸೂರು: ಕೋಲ್ಕತ್ತಾದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ (ಆ.17) ರಂದು ಖಾಸಗಿ ಆಸ್ಪತ್ರೆಗಳ ವೈದ್ಯರು ಹೊರರೋಗಿ ವಿಭಾಗ(ಒಪಿಡಿ) ಬಂದ್‌ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ.

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದು, ವೈದ್ಯರ ಮುಷ್ಕರದ ಕಾರಣ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Tags: