Mysore
23
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ದೋಸ್ತಿ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್‌ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಇದರಿಂದ ರೊಚ್ಚಿಗೆದ್ದಿರುವ ಮೈತ್ರಿ ನಾಯಕರು ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಮೈತ್ರಿ ನಾಯಕರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್‌ ಸ್ವಾಗತ ಮಾಡಬೇಕಿತ್ತು. ಅದನ್ನು ಬಿಟ್ಟು ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ನಾಳೆ ನಾವೆಲ್ಲಾ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತೇವೆ. ಜೆಡಿಎಸ್‌ ಶಾಸಕರನ್ನು ಕಳುಹಿಸುವಂತೆ ಕುಮಾರಸ್ವಾಮಿ ಜೊತೆ ಮಾತಾಡಿದ್ದೇನೆ ಎಂದು ಹೇಳಿದರು.

 

Tags:
error: Content is protected !!