ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ.
ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಇದರಿಂದ ರೊಚ್ಚಿಗೆದ್ದಿರುವ ಮೈತ್ರಿ ನಾಯಕರು ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಮೈತ್ರಿ ನಾಯಕರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು. ಅದನ್ನು ಬಿಟ್ಟು ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ನಾಳೆ ನಾವೆಲ್ಲಾ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತೇವೆ. ಜೆಡಿಎಸ್ ಶಾಸಕರನ್ನು ಕಳುಹಿಸುವಂತೆ ಕುಮಾರಸ್ವಾಮಿ ಜೊತೆ ಮಾತಾಡಿದ್ದೇನೆ ಎಂದು ಹೇಳಿದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…