ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆಯಲ್ಲಿ ನಾಳೆ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು, ನಾಳೆ ಬೆಳಿಗ್ಗೆ ಮಂಜುನಾಥ್ ಅವರ ಮೃತದೇಹ ನಗರಕ್ಕೆ ಆಗಮಿಸಲಿದೆ. ಮಧ್ಯಾಹ್ನದವರೆಗೂ ಮನೆ ಬಳಿ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು. ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಮೆರವಣಿಗೆಯಿಂದಿಗೆ ರೋಟರಿ ಚಿತಾಗಾರಕ್ಕೆ ತೆರಳಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು. ಯಾವುದೇ ಅಡ್ಡಿ ಆತಂಕ ಇಲ್ಲದೇ ಅಂತ್ಯಕ್ರಿಯೆ ಮೆರವಣಿಗೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.





