ಕಲಬುರ್ಗಿ: ನಾಳೆ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಕಲಬುರ್ಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಾಳೆ ಬೆಳಿಗ್ಗೆ ಸರ್ದಾರ್ ವಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಹುದ್ದೆ ಭರ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು. ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…