ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಫೋಕ್ಸೋ ಕೇಸ್ ಸಂಬಂಧ ತನಿಖೆ ನಡೆಯುತ್ತಿದ್ದು, ಇದೀಗ ನಾಳೆ ಇಬ್ಬರಿಗೂ ಬಿಗ್ ಡೇ ಆಗಿರಲಿದೆ.
ಈ ಎರಡೂ ಪ್ರಕರಣಗಳ ತೀರ್ಪು ನಾಳೆ ಹೈಕೋರ್ಟ್‌ನಲ್ಲಿ ಪ್ರಕಟವಾಗಲಿದ್ದು, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪರ ಎದೆಯಲ್ಲಿ ಢವ ಢವ ಶುರುವಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ತೀರ್ಪು ನಾಳೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ಪ್ರಕಟವಾಗಲಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡಾ ನಾಳೆಯೇ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ನಾಳಿನ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದ್ದು, ತೀರ್ಪು ಯಾರ ಪರ ಬರಲಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.





