Mysore
28
clear sky

Social Media

ಗುರುವಾರ, 22 ಜನವರಿ 2026
Light
Dark

ನಾಳೆ ಸಂವಿಧಾನ ದಿನಾಚರಣೆ ; ವಿಶೇಷ ಕಾರ್ಯಕ್ರಮ, ಸಂವಿಧಾನ ಜಾಗೃತಿ ಜಾಥಾಕ್ಕೆ ಸೂಚನೆ

ಬೆಂಗಳೂರು : ದೇಶದ ಸಂವಿಧಾನವು (ಸಂವಿಧಾನ್ ದಿವಸ್) ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಇಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲೂ ಸಂವಿಧಾನದ ಮಹತ್ವವನ್ನು ತಿಳಿಸುವ ವಿಶೇಷ ಕಾರ್ಯಕ್ರಮಗಳ ಮೂಲಕ ಸಂವಿಧಾನ ದಿನಾಚರಣೆಯನ್ನು ಮಹತ್ವಪೂರ್ಣವಾಗಿ ಆಚರಿಸಲು ಆದೇಶ ನೀಡಿದೆ. ಕೇಂದ್ರ ಸರ್ಕಾರವು ಸಂವಿಧಾನ 75 ಎಂಬ ವಿಶೇಷ ಘೋಷವಾಕ್ಯದೊಂದಿಗೆ ದೇಶಾದ್ಯಂತ ವ್ಯಾಪಕ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯ 

ಶಿಕ್ಷಣ ಇಲಾಖೆಯು ಪ್ರತಿ ಶಾಲೆ-ಕಾಲೇಜಿನಲ್ಲಿ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುವಂತೆ ಮತ್ತು ವಿದ್ಯಾರ್ಥಿಗಳಿಗೆ ಅದರ ಮಹತ್ವವನ್ನು ವಿವರಿಸುವಂತೆ ಸೂಚಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ಸಂವಿಧಾನವನ್ನು ಯುವ ಪೀಳಿಗೆಗೆ ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಸಂವಿಧಾನ ಜಾಗೃತಿ ಜಾಥಾ ನಡೆಸಬೇಕು ಎಂದು ತಾಕೀತು ಮಾಡಲಾಗಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನದ ಪೀಠಿಕೆಯನ್ನು ಸಾರ್ವಜನಿಕವಾಗಿ ಓದುವ ಮೂಲಕ ಚಾಲನೆ ನೀಡಲಿದ್ದಾರೆ.

ಸಂವಿಧಾನ ಆಚರಣೆಯ ಮಹತ್ವ
೧೯೪೯ರ ನವೆಂಬರ್ ೨೬ರಂದು ಸಂವಿಧಾನ ಸಭೆಯು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿತ್ತು. ೨ ವರ್ಷ, ೧೧ ತಿಂಗಳು, ೧೮ ದಿನಗಳ ಕಾಲ ನಡೆದ ಚರ್ಚೆಯ ನಂತರ ರೂಪಿತವಾದ ಈ ಸಂವಿಧಾನವು ಜಗತ್ತಿನ ಅತಿ ಉದ್ದದ ಲಿಖಿತ ಸಂವಿಧಾನವಾಗಿದೆ. ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಸಾಮಾಜಿಕ ನ್ಯಾಯದ ಮೂಲಭೂತ ತತ್ವಗಳನ್ನು ಒಳಗೊಂಡಿರುವ ಸಂವಿಧಾನ ಭಾರತದ ಆತ್ಮವೇ ಆಗಿದೆ.

Tags:
error: Content is protected !!