ಬೆಂಗಳೂರು: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ರಜೆ ಬಗ್ಗೆ ತೀರ್ಮಾನ ಮಾಡಿಲ್ಲ. ನಾಳೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇನ್ನು ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲ. ವಾಹನ ಇಲ್ಲದೇ ಇದ್ದರೆ ಮಕ್ಕಳಿಗೆ ತೊಂದರೆ ಆಗುತ್ತದೆ. ಆದ್ದರಿಂದ ಗೃಹ ಇಲಾಖೆ ಜೊತೆ ಚರ್ಚಿಸಿ ನಾಳೆ ತೀರ್ಮಾನ ಮಾಡುತ್ತೇವೆ. ಒಂದು ವೇಳೆ ನಾಳಿನ ಬಂದ್‌ಗೆ ಸಾರಿಗೆ ಇಲಾಖೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತದೆ ಎಂದು ಹೇಳಿದರು.





