ಬೆಂಗಳೂರು: ನಾಳೆ ಯಾರೇ ಏನೇ ಮಾಡಿದರೂ ಕರ್ನಾಟಕ ಬಂದ್ ಆಗೇ ಆಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕಳೆದ ಕೆಲದ ದಿನಗಳ ಹಿಂದೆ ಮಹಾರಾಷ್ಟ್ರದ ಮರಾಠಿಗರು ಕನ್ನಡಿಗರ ವಿರುದ್ಧ ನಡೆಸಿದ ಹಲ್ಲೆ, ದಬ್ಬಾಳಿಕೆ ಖಂಡಿಸಿ ನಾಳೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆಕೊಟ್ಟಿವೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು, ಯಾರೇ ಏನೇ ಮಾಡಿದರೂ ನಾಳೆ ಕರ್ನಾಟಕ ಬಂದ್ ಆಗೇ ಆಗುತ್ತದೆ. ರಾಜ್ಯದ ಹಲವಾರು ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ಆದ್ದರಿಂದ ಬಂದ್ ಯಶಸ್ವಿಯಾಗಿ ಆಗುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಕನ್ನಡಿಗರ ರಕ್ಷಣೆಗೆಂದೇ ಬಂದ್ ಮಾಡಲಾಗುತ್ತಿದೆ ಎಂದರು.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…