ಬೆಂಗಳೂರು: ರಾಜ್ಯದ ಕೆಲವೆಡೆ ನಾಳೆಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ ಧಾರಾಕಾರ ಮಳೆಯಾಗಲಿರುವ ಪರಿಣಾಮ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಆರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಗಾಳಿಯ ವೇಗವು 30 ರಿಂದ 40 ಕಿ.ಮೀ ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಕೊಪ್ಪಳ, ಗದಗ, ಹಾವೇರಿ, ಧಾರವಾಡ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.