Mysore
30
clear sky

Social Media

ಗುರುವಾರ, 13 ಫೆಬ್ರವರಿ 2025
Light
Dark

ನಾಳೆ ರಾಜ್ಯಕ್ಕೆ ರಾಧಾ ಮೋಹನ್‌ದಾಸ್‌ ಅಗರ್‌ವಾಲ್‌ ಭೇಟಿ: ಶಮನವಾಗುತ್ತಾ ಬಿಜೆಪಿ ಬಂಡಾಯ.?

ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದ್ದಂತೆ ಬಂಡಾಯ ಶಮನ ಮಾಡಲು ಹೈಕಮಾಂಡ್‌ ಎಂಟ್ರಿಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಉಸ್ತುವಾರಿ ರಾಧಾ ಮೋಹನ್‌ ದಾಸ್‌ ಅಗರ್‌ವಾಲ್‌ ಭೇಟಿ ನೀಡಲಿದ್ದು, ಮೂರು ಪ್ರಮುಖ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಮಧ್ಯಾಹ್ನ 3 ಗಂಟೆಗೆ ಶಾಸಕರು ಹಾಗೂ ಸಂಸದರ ಜೊತೆ ಸಭೆ ನಡೆಸಿ ಅವರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಸಂಘಟನೆ ಪರ್ವದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾಧ್ಯಕ್ಷ ಹಾಗೂ ರಾಜ್ಯಾಧ್ಯಕ್ಷ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇನ್ನು ಸಂಜೆ 7 ಗಂಟೆಗೆ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಅದರಲ್ಲಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಅದರಲ್ಲಿ ಮುಖ್ಯವಾಗಿ ಶಾಸಕ ಬಸವಗೌಡ ಪಾಟೀಲ್‌ ಯತ್ನಾಳ್‌, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ ಹೇಳಿಕೆಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಪದೇ ಪದೇ ಆಗ್ರಹ ಕೇಳಿಬರುತ್ತಿದ್ದು, ಇದು ನಾಳೆ ಶಮನವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ ಎನ್ನಲಾಗಿದೆ.

Tags: