ಬೆಂಗಳೂರು: ಬಿಜೆಪಿ ಆಂತರಿಕ ಕಿತ್ತಾಟ ಜೋರಾಗುತ್ತಿದ್ದಂತೆ ಬಂಡಾಯ ಶಮನ ಮಾಡಲು ಹೈಕಮಾಂಡ್ ಎಂಟ್ರಿಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಕ್ಕೆ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್ ಭೇಟಿ ನೀಡಲಿದ್ದು, ಮೂರು ಪ್ರಮುಖ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಶಾಸಕರು ಹಾಗೂ ಸಂಸದರ ಜೊತೆ ಸಭೆ ನಡೆಸಿ ಅವರಿಂದ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಸಂಘಟನೆ ಪರ್ವದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾಧ್ಯಕ್ಷ ಹಾಗೂ ರಾಜ್ಯಾಧ್ಯಕ್ಷ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಇನ್ನು ಸಂಜೆ 7 ಗಂಟೆಗೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದರಲ್ಲಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಅದರಲ್ಲಿ ಮುಖ್ಯವಾಗಿ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ ಹೇಳಿಕೆಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ಪದೇ ಪದೇ ಆಗ್ರಹ ಕೇಳಿಬರುತ್ತಿದ್ದು, ಇದು ನಾಳೆ ಶಮನವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ ಎನ್ನಲಾಗಿದೆ.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…