Mysore
22
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ನಾಳೆ ಗೃಹ ಆರೋಗ್ಯ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಗೆ ನಾಳೆ ಚಾಲನೆ ದೊರೆಯಲಿದೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸಲು ಹಾಗೂ ಸಾಂಕ್ರಾಮಿಕ ರೋಗ ತಡೆಗಟ್ಟಲು ಈ ಯೋಜನೆಯಿಂದ ಸಾಧ್ಯವಾಗಲಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಕೋಲಾರ ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಭಾಗದ ಜನರು ಬಿಪಿ ಹಾಗೂ ಶುಗರ್‌ ತಪಾಸಣೆ ಬಗ್ಗೆ ಭಾರೀ ನಿರ್ಲಕ್ಷ್ಯ ಮಾಡುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಬಿಪಿ ಹಾಗೂ ಶುಗರ್‌ ಮಟ್ಟವನ್ನು ಪರಿಶೀಲನೆ ನಡೆಸಲಿದ್ದಾರೆ.

ಮೌಖಿಕ ಹಾಗೂ ಗರ್ಭಕಂಠದ ಮತ್ತು ಸ್ತನ ಕ್ಯಾನ್ಸರ್‌ಗಳ ಮೌಲ್ಯಮಾಪನಗಳನ್ನು ಇದು ಒಳಗೊಂಡಿರುವುದು ವಿಶೇಷವೆನಿಸಿದೆ.

ಒಟ್ಟಾರೆಯಾಗಿ ಈ ಯೋಜನೆಯು ಆರೋಗ್ಯ ಇಲಾಖೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

 

 

Tags:
error: Content is protected !!