ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಗೆ ನಾಳೆ ಚಾಲನೆ ದೊರೆಯಲಿದೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸಲು ಹಾಗೂ ಸಾಂಕ್ರಾಮಿಕ ರೋಗ ತಡೆಗಟ್ಟಲು ಈ ಯೋಜನೆಯಿಂದ ಸಾಧ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಕೋಲಾರ ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಭಾಗದ ಜನರು ಬಿಪಿ ಹಾಗೂ ಶುಗರ್ ತಪಾಸಣೆ ಬಗ್ಗೆ ಭಾರೀ ನಿರ್ಲಕ್ಷ್ಯ ಮಾಡುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಬಿಪಿ ಹಾಗೂ ಶುಗರ್ ಮಟ್ಟವನ್ನು ಪರಿಶೀಲನೆ ನಡೆಸಲಿದ್ದಾರೆ.
ಮೌಖಿಕ ಹಾಗೂ ಗರ್ಭಕಂಠದ ಮತ್ತು ಸ್ತನ ಕ್ಯಾನ್ಸರ್‌ಗಳ ಮೌಲ್ಯಮಾಪನಗಳನ್ನು ಇದು ಒಳಗೊಂಡಿರುವುದು ವಿಶೇಷವೆನಿಸಿದೆ.
ಒಟ್ಟಾರೆಯಾಗಿ ಈ ಯೋಜನೆಯು ಆರೋಗ್ಯ ಇಲಾಖೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…