ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕರವೇ ಅಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಬೆಂಗಳೂರು ಸೇರಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ.
ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇಕಡಾ ೧೦೦ ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು, ಇತರೆ ಗ್ರೂಪ್ ಗಳಲ್ಲಿ ಶೇಕಡಾ ೮೦ರಷ್ಟು ಮೀಸಲಾತಿ ನೀಡಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಲಾಗುತ್ತಿದೆ.