Mysore
30
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ನಾಳೆ ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿದ ಬಳಿಕ ನಾಳೆ ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಮಾರ್ಚ್.‌1ರಿಂದ ಮಾರ್ಚ್.‌20ರವರೆಗೆ ನಡೆದಿದ್ದ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದ್ದು, ನಾಳೆ ಮಧ್ಯಾಹ್ನದ ಮೇಲೆ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Tags:
error: Content is protected !!