Mysore
20
broken clouds

Social Media

ಶುಕ್ರವಾರ, 23 ಜನವರಿ 2026
Light
Dark

ನಾಳೆಯಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ

ಬೆಂಗಳೂರು: ನಾಳೆಯಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್.‌21ರ ತನಕ ನಡೆಯಲಿದೆ.

ನಾಳೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶನಿವಾರ ಹಾಗೂ ಭಾನುವಾರ ಹೊರತುಪಡಿಸಿ 14 ದಿನ ಬಜೆಟ್‌ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್.‌4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ.

ಮಾರ್ಚ್.‌7ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದು, ಬಜೆಟ್‌ ಮೇಲೆ ಜನರು ಹಲವು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಶಾಸಕರು ಹಾಗೂ ಸಚಿವರು ಕೂಡ ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡುವಂತೆ ಆಗಾಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಲೇ ಇದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ರಾಜ್ಯ ಬಜೆಟ್‌ನತ್ತ ನೆಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಗಿಫ್ಟ್‌ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

 

Tags:
error: Content is protected !!