ಬೆಂಗಳೂರು: ನಾಳೆಯಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್.21ರ ತನಕ ನಡೆಯಲಿದೆ.
ನಾಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಶನಿವಾರ ಹಾಗೂ ಭಾನುವಾರ ಹೊರತುಪಡಿಸಿ 14 ದಿನ ಬಜೆಟ್ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್.4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ.
ಮಾರ್ಚ್.7ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮೇಲೆ ಜನರು ಹಲವು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಶಾಸಕರು ಹಾಗೂ ಸಚಿವರು ಕೂಡ ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡುವಂತೆ ಆಗಾಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಲೇ ಇದ್ದಾರೆ.
ಈ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ರಾಜ್ಯ ಬಜೆಟ್‌ನತ್ತ ನೆಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…