ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ನಾಳೆ ಮಂಡಿಸಲಿರುವ ಬಜೆಟ್ ಗಾತ್ರ ಮೂರು ಲಕ್ಷ ಕೋಟಿಗೂ ಮೀರಲಿದೆ ಎಂಬ ಮಾಹಿತಿ ಲಭ್ಯವಾಗಲಿದ್ದು, ಇದು ಜನಪರ ಬಜೆಟ್ ಎಂದು ಹೇಳಲಾಗುತ್ತಿದೆ.
ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಕಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ ಬೆಳಿಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದು, ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲಾ ವಲಯಗಳಿಗೂ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡುವ ನಿರೀಕ್ಷೆಯಿದೆ.
ರೈತರು, ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡದವರ ಸಬಲೀಕರಣದ ಹೊಸ ಕಾರ್ಯಕ್ರಮಗಳು ನಾಳೆ ಬಜೆಟ್‌ನಲ್ಲಿ ಘೋಷಣೆ ಆಗುವ ಸಾಧ್ಯತೆಯಿದೆ.
ನಾಳೆ ಸಿಎಂ ಸಿದ್ದು ತಮ್ಮ 16ನೇ ಬಜೆಟ್ ಮಂಡನೆ ಮಾಡಲಿದ್ದು, ಎಲ್ಲರ ಚಿತ್ತ ಬಜೆಟ್‌ನತ್ತ ನೆಟ್ಟಿದೆ.