ರಾಜ್ಯ

ನಾಳೆ 17ನೇ ಐತಿಹಾಸಿಕ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ ಮೂಲಕ ದಾಖಲೆ ಬರೆಯಲು ಸಿದ್ದರಾಗಿದ್ದಾರೆ.

ಕಳೆದ ಬಾರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ 4,09,549 ಕೋಟಿ ರೂಪಾಯಿ ಗಾತ್ರ ಹೊಂದಿತ್ತು. ಈ ಬಾರಿ ಬಜೆಟ್ ಗಾತ್ರ ಮತ್ತಷ್ಟು ವಿಸ್ತಾರಗೊಳ್ಳುವ ನಿರೀಕ್ಷೆಯಿದೆ.ಈ ಬಾರಿಯ ಬಜೆಟ್‍ನಲ್ಲೂ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ, ಅಭಿವೃದ್ಧಿ ಮತ್ತು ಆರ್ಥಿಕ ಶಿಸ್ತಿನ ಸಮತೋಲನ ಸಾಧಿಸುವ ಸವಾಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿದೆ.

ಈಗಾಗಲೇ ರಾಜ್ಯದ ಸಾಲ ಹನುಮಂತನ ಬಾಲದಂತೆ ದೊಡ್ಡದಾಗಿ ಬೆಳೆದಿದೆ. ಒಂದೆಡೆ ಆರ್ಥಿಕ ಅಭಿವೃದ್ಧಿ ಹಾಗೂ ಮತ್ತೊಂದೆಡೆ ಗ್ಯಾರಂಟಿಗಳ ನಡುವೆ ಸಮತೋಲಿತ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ. ಮದ್ಯ, ಮೋಟಾರು ತೆರಿಗೆ ಸೇರಿದಂತೆ ವಿವಿಧ ಬಾಬ್ತುಗಳ ಮೇಲೆ ತೆರಿಗೆಯ ಹೊರೆಯನ್ನು ನಿರೀಕ್ಷಿಸಲಾಗಿದೆ.

ಸಾಲು ಸಾಲು ಸವಾಲುಗಳನ್ನ ಎದುರಿಸುತ್ತಿರುವ ಸಿಎಂ, ಹಣಕಾಸಿನ ಕೊರತೆಯ ನಡುವೆಯೂ 5 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆರಾಜ್ಯ ಸರ್ಕಾರ ತೆರಿಗೆ ಸಂಗ್ರಹ ಕಳೆದ ವರ್ಷಕ್ಕಿಂತ ಗಣೀನಿಯವಾಗಿ ಕುಸಿದಿದೆ. ಹೀಗಾಗಿ ಸಿಎಂ ಸಿದ್ದರಾಮುಯ್ಯರಿಗೆ ಸಂಪನ್ಮೂಲ ಕ್ರೂಡೀಕರಣವೇ ದೊಡ್ಡ ಸಮಸ್ಯೆಯಾಗಿದೆ. ಜೊತೆಗೆ ಸಂಪನ್ಮೂಲದ ತೀವ್ರ ಕೊರತೆಯಿಂದಾಗಿ, ಪಂಚ ಗ್ಯಾರಂಟಿ ಯೋಜನೆಗಳ ನಿಯಮಗಳನ್ನು ಬಿಗಿಗೊಳಿಸಲು ಅಥವಾ ಕೆಲವೊಂದಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ನಡೆಸಿದ ಸಾಲು ಸಾಲು ಸಭೆಗಳಲ್ಲಿ ಈ ಬಗ್ಗೆ ಪ್ರಮುಖ ಚರ್ಚೆಗಳು ನಡೆಸಲಾಗಿದ್ದು, ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಮತ್ತು ನಿಗದಿತ ಮಿತಿಗಿಂತ ಹೆಚ್ಚು ಜಮೀನು ಹೊಂದಿರುವವರ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸಿ, ಅರ್ಹರನ್ನು ಗ್ಯಾರಂಟಿಗಳಿಂದ ಹೊರಗಿಡುವ ಪ್ಲಾನ್ ಮಾಡಲಾಗಿದೆ. ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ಮುಂದೆ ಜೀವಂತ ಪ್ರಮಾಣ ಪತ್ರ ಕಡ್ಡಾಯಗೊಳಿಸುವ ಸಾಧ್ಯತೆಯಿದೆ.

ರಾಜ್ಯದ ಆದಾಯದ ಕೊರತೆಯನ್ನು ನೀಗಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಹಲವು ಸಲಹೆಗಳನ್ನು ಪಡೆದಿದ್ದಾರೆ. ಅಲ್ಲದೇ ಹಲವು ತೆರಿಗೆಗಳನ್ನ ಹೆಚ್ಚಳ ಮಾಡಲು ಸರ್ಕಾರ ತಯಾರಿ ನಡೆಸುತ್ತಿದ್ದಾರೆ.
5 ಗ್ಯಾರಂಟಿಗಳಿಗೆ ಕಳೆದ ವರ್ಷ 56 ಸಾವಿರ ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲ್ಪಟ್ಟಿರುವುದಾಗಿ ಘೋಷಿಸಲಾಗಿತ್ತು. ಅದು ಬಹುತೇಕ ಖರ್ಚಾಗಿದೆ. ಆದರೆ ಆ ಅನುದಾನದ ಜೊತೆ ಎಸ್?ಇಪಿ, ಟಿಎಸ್?ಪಿಯಡಿ ನಿಗದಿಯಾಗಿದ್ದ 14 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ.56 ಸಾವಿರ ಕೋಟಿಗಳ ನಿಗದಿತ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 14ಸಾವಿರ ಕೋಟಿ ರೂ. ಬಳಕೆ ಮಾಡಿರುವುದರಿಂದಾಗಿ ಗ್ಯಾರಂಟಿ ಯೋಜನೆಗಳಿಗೆ ಒಟ್ಟು 70ಸಾವಿರ ಕೋಟಿ ರೂ.ಗಳು ಖರ್ಚಾಗಿದೆಯೇ ಎಂಬ ಅನುಮಾನಗಳು ಕಾಡಲಾರಂಭಿಸಿವೆ.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ವೆಚ್ಚ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಹೊಸ ಪಡಿತರ ಚೀಟಿಗಳಿಗೆ ಅವಕಾಶ ನೀಡದೇ ಇರುವುದರಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಸದ್ಯಕ್ಕೆ ತಟಸ್ಥವಾಗಿದೆ. ಒಂದು ವೇಳೆ ಹೊಸ ಪಡಿತರ ಚೀಟಿಗಳನ್ನು ನೀಡಿದರೆ, ಫಲಾನುಭವಿಗಳ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ ಇದೆ. ಹೀಗಾಗಿ ಹೊಸ ಪಡಿತರ ಚೀಟಿಗಳನ್ನು ವಿತರಿಸಬಾರದು ಎಂದು ಆಹಾರ ಇಲಾಖೆಯ ಮೇಲೆ ಭಾರಿ ಒತ್ತಡ ಹೇರಲಾಗುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

11 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

11 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

12 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

12 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

13 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

13 hours ago