ರಾಜ್ಯ

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾರಿ ಬಿಗಿಭದ್ರತೆ ಕೈಗೊಳ್ಳಲಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಸಮರ್ಥ್ ಶಾಮನೂರು, ಬಿಜೆಪಿಯ ಶ್ರೀನಿವಾಸ ದಾಸ ಕರಿಯಪ್ಪ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಮೇಲ್ನೋಟಕ್ಕೆ ಈ ಫಲಿತಾಂಶ ಆಡಳಿತರೂಢ ಕಾಂಗ್ರೆಸ್ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲವಾದರೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇದು ಮತದಾರರ ಒಲವು ಯಾರ ಪರ ಇದೆ ಎಂಬುದನ್ನು ಅರಿಯಲು ನೆರವಾಗಲಿದೆ.

ಪ್ರತಿಪಕ್ಷ ಬಿಜೆಪಿಗೆ ಈ ಚುನಾವಣೆಯು ಸವಾಲಾಗಿ ಪರಿಣಮಿಸಿದ್ದು ಒಂದು ವೇಳೆ ಎರಡು ಕ್ಷೇತ್ರಗಳಲ್ಲಿ ಗೆದ್ದರೆ ಮುಂಬರುವ ಸ್ಥಳೀಯ ಸಂಸ್ಥೆಗಳು ಮತ್ತು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಬಿಂಬಿಸಲು ಮುಂದಾಗಿದೆ. ಹೀಗಾಗಿ ಈ ಬಾರಿ ತನ್ನ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಅಭ್ಯರ್ಥಿಗಳ ಪರ ಒಗ್ಗಟ್ಟಿನ ಪ್ರದರ್ಶನ ನಡೆಸಿರುವುದು ಈ ಚುನಾವಣೆಯ ವಿಶೇಷ.

ಆಂದೋಲನ ಡೆಸ್ಕ್

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

16 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

46 mins ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

1 hour ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

1 hour ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

11 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago