ರಾಜ್ಯ

ನಾಳೆ ಬೆಂಗಳೂರಿನಲ್ಲಿ ಅಮೇರಿಕಾ ಕಾನ್ಸುಲೇಟ್‌ ಆರಂಭ: ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಬೆಂಗಳೂರು: ಅಮೇರಿಕಾ ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೇರಿಕಾದ ದೂತವಾಸ(ಕಾನ್ಸಲೇಟ್‌) ಕಚೇರಿ ಸ್ಥಾಪಿಸಬೇಕೆಂಬ ಬೆಂಗಳೂರಿಗರ ಬಹುಕಾಲದ ಬೇಡಿಕೆಯು ಇದೇ ತಿಂಗಳ 17ರಂದು ನನಸಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಈ ಬಗ್ಗೆ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನ ಪ್ರೀತಿಯ ಬೆಂಗಳೂರಿಗರೇ ಇದೀಗ ಜ.17ರಂದು ಅಮೇರಿಕ ಕಾನ್ಸುಲೇಟ್‌ ತೆರೆಯಲಾಗುತ್ತಿದೆ. ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಸಂಬಂಧ ವಿದೇಶಾಂಗ ಸಚಿವ ಜೈ ಶಂಕರ್‌ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಅವರ ಜೊತೆ ಇರುವ ವಿಡಿಯೊವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಮೇರಿಕ ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೇರಿಕಾ ದೂತವಾಸ ಕಚೇರಿ ಸ್ಥಾಪಿಸುವುದು ಬಹುಕಾಲದ ಬೇಡಿಕೆಯಾಗಿತ್ತು. ಇಲ್ಲಿವರೆಗೆ ಜನರು ಅಮೇರಿಕಾ ವೀಸಕ್ಕಾಗಿ ಚೆನ್ನೈ ಅಥವಾ ಹೈದರಾಬಾದ್‌ಗೆ ತೆರಳುತ್ತಿದ್ದರು.

ಆಂದೋಲನ ಡೆಸ್ಕ್

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

50 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

57 mins ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

1 hour ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

1 hour ago