ಬೆಂಗಳೂರು: ಅಮೇರಿಕಾ ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೇರಿಕಾದ ದೂತವಾಸ(ಕಾನ್ಸಲೇಟ್) ಕಚೇರಿ ಸ್ಥಾಪಿಸಬೇಕೆಂಬ ಬೆಂಗಳೂರಿಗರ ಬಹುಕಾಲದ ಬೇಡಿಕೆಯು ಇದೇ ತಿಂಗಳ 17ರಂದು ನನಸಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಬಗ್ಗೆ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಪ್ರೀತಿಯ ಬೆಂಗಳೂರಿಗರೇ ಇದೀಗ ಜ.17ರಂದು ಅಮೇರಿಕ ಕಾನ್ಸುಲೇಟ್ ತೆರೆಯಲಾಗುತ್ತಿದೆ. ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಸಂಬಂಧ ವಿದೇಶಾಂಗ ಸಚಿವ ಜೈ ಶಂಕರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಅವರ ಜೊತೆ ಇರುವ ವಿಡಿಯೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಮೇರಿಕ ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೇರಿಕಾ ದೂತವಾಸ ಕಚೇರಿ ಸ್ಥಾಪಿಸುವುದು ಬಹುಕಾಲದ ಬೇಡಿಕೆಯಾಗಿತ್ತು. ಇಲ್ಲಿವರೆಗೆ ಜನರು ಅಮೇರಿಕಾ ವೀಸಕ್ಕಾಗಿ ಚೆನ್ನೈ ಅಥವಾ ಹೈದರಾಬಾದ್‌ಗೆ ತೆರಳುತ್ತಿದ್ದರು.
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…