Concept of SSLC exam Results conducted in India, in wooden block letters on table.
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಏಪ್ರಿಲ್ 2ರ ವರೆಗೂ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಯಾವುದೇ ಅಕ್ರಮ ಮತ್ತು ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಪರೀಕ್ಷೆಗೆ ನೋಂದಾಯಿಸಿದ ಒಟ್ಟು 9,02,899 ಪೈಕಿ 8,12,855 ವಿದ್ಯಾರ್ಥಿಗಳು ಹೊಸಬರು, 62,845 ವಿದ್ಯಾರ್ಥಿಗಳು ಪುನರಾವರ್ತಿತ ಹಾಗೂ 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಣಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಈ ಬಾರಿಯೂ ಮುಂದುವರೆದಿದೆ ಎಂದು ಮಂಡಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವದಂತಿ ಹಬ್ಬಿಸಿದರೆ ಕ್ರಮ
ವದಂತಿ ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವಂಥವರ ಮೇಲೆ ನಿಗಾ ಇರಿಸಲಾಗುತ್ತಿದೆ. ಜೊತೆಗೆ ಇಂಥ ಅಕ್ರಮ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…