ರಾಜ್ಯ

SSLC EXAM | ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್‌ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಏಪ್ರಿಲ್ 2ರ ವರೆಗೂ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಯಾವುದೇ ಅಕ್ರಮ ಮತ್ತು ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

ಪರೀಕ್ಷೆಗೆ ನೋಂದಾಯಿಸಿದ ಒಟ್ಟು 9,02,899 ಪೈಕಿ 8,12,855 ವಿದ್ಯಾರ್ಥಿಗಳು ಹೊಸಬರು, 62,845 ವಿದ್ಯಾರ್ಥಿಗಳು ಪುನರಾವರ್ತಿತ ಹಾಗೂ 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಣಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಈ ಬಾರಿಯೂ ಮುಂದುವರೆದಿದೆ ಎಂದು ಮಂಡಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವದಂತಿ ಹಬ್ಬಿಸಿದರೆ ಕ್ರಮ
ವದಂತಿ ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವಂಥವರ ಮೇಲೆ ನಿಗಾ ಇರಿಸಲಾಗುತ್ತಿದೆ. ಜೊತೆಗೆ ಇಂಥ ಅಕ್ರಮ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

2 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

2 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

9 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

9 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

9 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

9 hours ago