Mysore
26
overcast clouds

Social Media

ಶುಕ್ರವಾರ, 09 ಜನವರಿ 2026
Light
Dark

ಟೊಮೊಟೊ ದರದಲ್ಲಿ ಭಾರೀ ಏರಿಕೆ: ಕಂಗಾಲಾದ ಗ್ರಾಹಕರು

ಬೆಂಗಳೂರು: ಜನಸಾಮಾನ್ಯರಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದ್ದು, ಟೊಮೋಟೋ ದರ ಏರಿಕೆಯಾಗಿದೆ.

ಕಳೆದ ಒಂದು ವಾರದ ಹಿಂದೆ ಕೆಜಿಗೆ 40ರೂ ಇದ್ದ ದರ ಈಗ ಎರಡು ಪಟ್ಟು ಏರಿಕೆಯಾಗಿದೆ. ಶುಕ್ರವಾರದಿಂದ ಕೆಜಿಗೆ 80 ರೂ ದರದಲ್ಲಿ ಟೊಮೋಟೋ ಮಾರಾಟವಾಗುತ್ತಿದೆ.

ಅಕಾಲಿಕ ಮಳೆಯಿಂದ ಟೊಮೊಟೋ ಇಳುವರಿ ಕುಸಿತಗೊಂಡಿದೆ. ಇದರ ಜೊತೆ ಈಗ ನವರಾತ್ರಿ ಹಬ್ಬ ಆರಂಭಗೊಂಡಿದೆ.

ಬೇಡಿಕೆ ಜಾಸ್ತಿಯಿದ್ದು, ಪೂರೈಕೆ ಕಡಿಮೆ ಇರುವ ಕಾರಣ ಟೊಮೊಟೊ ಬೆಲೆ ದಿಢೀರ್‌ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.

ಬೆಲೆ ಏರಿಕೆಗೆ ಮಳೆಯೇ ಕಾರಣ ಎನ್ನಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಟೊಮೊಟೋ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.

Tags:
error: Content is protected !!