ಬೆಂಗಳೂರು: ಜನಸಾಮಾನ್ಯರಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದ್ದು, ಟೊಮೋಟೋ ದರ ಏರಿಕೆಯಾಗಿದೆ.
ಕಳೆದ ಒಂದು ವಾರದ ಹಿಂದೆ ಕೆಜಿಗೆ 40ರೂ ಇದ್ದ ದರ ಈಗ ಎರಡು ಪಟ್ಟು ಏರಿಕೆಯಾಗಿದೆ. ಶುಕ್ರವಾರದಿಂದ ಕೆಜಿಗೆ 80 ರೂ ದರದಲ್ಲಿ ಟೊಮೋಟೋ ಮಾರಾಟವಾಗುತ್ತಿದೆ.
ಅಕಾಲಿಕ ಮಳೆಯಿಂದ ಟೊಮೊಟೋ ಇಳುವರಿ ಕುಸಿತಗೊಂಡಿದೆ. ಇದರ ಜೊತೆ ಈಗ ನವರಾತ್ರಿ ಹಬ್ಬ ಆರಂಭಗೊಂಡಿದೆ.
ಬೇಡಿಕೆ ಜಾಸ್ತಿಯಿದ್ದು, ಪೂರೈಕೆ ಕಡಿಮೆ ಇರುವ ಕಾರಣ ಟೊಮೊಟೊ ಬೆಲೆ ದಿಢೀರ್ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.
ಬೆಲೆ ಏರಿಕೆಗೆ ಮಳೆಯೇ ಕಾರಣ ಎನ್ನಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಟೊಮೊಟೋ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…