Mysore
17
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಸರ್ಕಾರದ ದಸರಾ ಜಾಹೀರಾತಿಗೆ ಬಿಜೆಪಿ ಟಾಂಗ್

ಬೆಂಗಳೂರು: ಕಾಂಗ್ರೆಸ್‌ ಜಾಹೀರಾತು ನೀಡುವುದರಿಂದ ಮಾಡಿರುವ ಭ್ರಷ್ಟಾಚಾರಗಳು ಮತ್ತು ಪಾಪಕರ್ಮ ಪರಿಹಾರವಾಗುವುದಿಲ್ಲ ಎಂದು ಬಿಜೆಪಿಗೆ ಟಾಂಗ್‌ ನೀಡಿದೆ.

ಬಿಜೆಪಿ ತಮ್ಮ ಎಕ್ಸ್‌ ಖಾತೆಯಲ್ಲಿ ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ ಮತ್ತು ಮುಡಾ ಪ್ರಕರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯವಾಗಿ ಬಳಸಿಕೊಳ್ಳುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಈ ರೀತಿ ಜಾಹೀರಾತು ನೀಡಿರುವುದರಿಂದ ಅವರು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ. ರಾಮ ಸತ್ಯನೇ ಆಗಿದ್ದಾನೆ. ಆದರೆ, ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳುಗಾರ, ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದರು. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಸತ್ಯಶೋಧನೆಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್‌ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಹಿತಿ ಸಂದೇಶವನ್ನು ಹಂಚಿಕೊಂಡಿದೆ.

Tags:
error: Content is protected !!