ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟರ್ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ.
ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂಗೌಡ ಬಲಿಯಾಗಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿದೆ.
ಕಳೆದ ಕೆಲ ತಿಂಗಳುಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್‌ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ಕಳೆದ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ.
ಈ ಕೂಂಬಿಂಗ್‌ನಲ್ಲಿ ವಿಕ್ರಂಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಯಿಂದ ಈತ ಸಾವನ್ನಪ್ಪಿದ್ದಾನೆ.
ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದ್ದು, ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.