ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಡಾ ದಾಖಲೆಗಳಲ್ಲಿ ವೈಟ್ನರ್ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂದು ವಿಪಕ್ಷಗಳು ಆರೋಪಿಸಿದ್ದರು. ಇದಕ್ಕೆ ಸಿಎಂ ಪ್ರತ್ಯುತ್ತರವಾಗಿ ಟಾರ್ಚ್ ಹಾಕಿ ಅಕ್ಷರಗಳ ಹಿಂದಿರುವ ಸತ್ಯವನ್ನು ವಿಡಿಯೋ ಸಾಕ್ಷಿ ಸಮೇತ ತಿರುಗೇಟು ನೀಡಿದ್ದರು. ಇದೀಗ, ಟಾರ್ಚ್ ಹಾಕಿ ಅಕ್ಷರ ಹುಡುಕುತ್ತಿರುವುದು ಸಿಎಂಗೆ ಶೋಭೆಯಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಚ್‌ಡಿಕೆ, ಮುಡಾ ಪ್ರಕರಣ ಸಂಬಂಧಿಸಿದಂತೆ ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದ ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದಿದ್ದಾರೆ.
ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ?ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಸಿಎಂಗೆ ಎಚ್‌ಡಿಕೆ ಪ್ರಶ್ನೆ
ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ.. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…