Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

nandibetta

ಚಿಕ್ಕಬಳ್ಳಾಪುರ: ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

ಜೂನ್.19ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂನ್.‌20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರ ಜೊತೆಗೆ ನಂದಿಗಿರಿಧಾಮದ ಮೇಲ್ಬಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ಹೇರಲಾಗಿದೆ.

ಇದನ್ನೂ ಓದಿ:- ಮಡಿಕೇರಿ| ಗಾಳಿ ಮಳೆಗೆ ಮನೆ ಗೋಡೆ ಕುಸಿತ: ಕಂಗಾಲಾದ ಕುಟುಂಬ

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಂದಿಗಿರಿಧಾಮಕ್ಕೆ ಹೋಗಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

Tags:
error: Content is protected !!