nandibetta
ಚಿಕ್ಕಬಳ್ಳಾಪುರ: ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.
ಜೂನ್.19ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂನ್.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರ ಜೊತೆಗೆ ನಂದಿಗಿರಿಧಾಮದ ಮೇಲ್ಬಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ಹೇರಲಾಗಿದೆ.
ಇದನ್ನೂ ಓದಿ:- ಮಡಿಕೇರಿ| ಗಾಳಿ ಮಳೆಗೆ ಮನೆ ಗೋಡೆ ಕುಸಿತ: ಕಂಗಾಲಾದ ಕುಟುಂಬ
ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಂದಿಗಿರಿಧಾಮಕ್ಕೆ ಹೋಗಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…