ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರಮನೆ ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರವಾಗಿದೆ. ಆದರೆ ಇತ್ತೀಚೆಗೆ ದೇವರಮನೆ ಕ್ಷೇತ್ರ ಪ್ರವಾಸಿಗರ ಮೋಜು ಮಸ್ತಿಯ ಅಡ್ಡೆಯಾಗಿ ಕಂಡುಬರುತ್ತಿದೆ.
ದೇವರಮನೆಯಲ್ಲಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್ ಮಾಡಿ ವಾಹನಗಳು ಓಡಾಡದಂತೆ ಮಾಡುತ್ತಿದ್ದಾರೆ. ಪ್ರವಾಸಿಗರು ರಸ್ತೆ ಮಧ್ಯೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯರ ಮಾತಿಗೂ ಕಿಮ್ಮತ್ತು ನೀಡದೆ ಹಾಗೂ ಪ್ರಪಾತದ ಸ್ಥಳದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದು, ಕೂಡಲೇ ಬಣಕಲ್ ಠಾಣಾ ಪೊಲೀಸರು ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.