ರಾಜ್ಯ

ಪ್ರವಾಸಿಗರ ಮೋಜು ಮಸ್ತಿಯ ಅಡ್ಡವಾಗುತ್ತಿದೆ ದೇವರಮನೆ : ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಹುಚ್ಚಾಟ

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರಮನೆ  ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರನ ಕ್ಷೇತ್ರವಾಗಿದೆ. ಆದರೆ ಇತ್ತೀಚೆಗೆ ದೇವರಮನೆ ಕ್ಷೇತ್ರ ಪ್ರವಾಸಿಗರ ಮೋಜು ಮಸ್ತಿಯ ಅಡ್ಡೆಯಾಗಿ ಕಂಡುಬರುತ್ತಿದೆ.

ದೇವರಮನೆಯಲ್ಲಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗುವಂತೆ ಕಾರು ನಿಲ್ಲಿಸಿಕೊಂಡು ಪ್ರವಾಸಿಗರು ಮೋಜು, ಮಸ್ತಿ, ಡ್ಯಾನ್ಸ್‌ ಮಾಡಿ ವಾಹನಗಳು ಓಡಾಡದಂತೆ ಮಾಡುತ್ತಿದ್ದಾರೆ. ಪ್ರವಾಸಿಗರು ರಸ್ತೆ ಮಧ್ಯೆ ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸ್ಥಳೀಯರ ಮಾತಿಗೂ ಕಿಮ್ಮತ್ತು ನೀಡದೆ ಹಾಗೂ ಪ್ರಪಾತದ ಸ್ಥಳದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದು, ಕೂಡಲೇ ಬಣಕಲ್‌ ಠಾಣಾ ಪೊಲೀಸರು ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

6 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

6 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

7 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

7 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

7 hours ago