ಚಿಕ್ಕಬಳ್ಳಾಪುರ : ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ಕೊಡುತ್ತಿರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ನಂದಿ ಬೆಟ್ಟ ನೋಡಲು ನಾನಾ ಭಾಗದಿಂದ ಸಾವಿರಾರು ಮಂದಿ ಪ್ರವಾಸಿಗರು ಕಾರು, ಬೈಕ್ ಗಳಲ್ಲಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ರಸ್ತೆಯಲ್ಲಿಯೇ ವಾಹನಗಳು ಕಿಕ್ಕಿರಿದು ತುಂಬಿದ್ದವು. ಮುಂಜಾನೆ ೫ ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿತ್ತು. ಪೊಲೀಸರು ಸಹ ಈ ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾಗಿ ಹೋದರು. ಇನ್ನ ಕೆಲ ಪ್ರವಾಸಿಗರು ಟ್ರಾಫಿಕ್ ಜಾಮ್ ನಿಂದ ರಸ್ತೆ ಮಧ್ಯೆ ಸಿಲುಕಿಕೊಂಡು ಅತ್ತ ಬೆಟ್ಟದ ಮೇಲೂ ಹೊಗಲಾಗದೆ , ಇತ್ತ ಕಳಗೆ ವಾಪಸ್ ಬರಲಾಗದೆ ಪರದಾಡಿದರು.