ರಾಜ್ಯ

ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್‌ ಆರಂಭ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಟೋಯಿಂಗ್‌ ಆರಂಭಿಸುವುದಾಗಿ ಸರ್ಕಾರ ಈಗಾಗಲೇ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್‌ ಆರಂಭವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದರು.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಸ್ತೆಗಳನ್ನು ಮಾಡುವುದು ಯಾತಕ್ಕೆ? ಜನರು ಓಡಾಡಲಿ ಎಂದು. ಆದರೆ ರಸ್ತೆಗಳಲ್ಲಿಯೇ ವಾಹನಗಳನ್ನು ಪಾರ್ಕಿಂಗ್‌ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸುಗಮ ಸಂಚಾರಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಕಡೆಗಳಲ್ಲಿ ಮುಖ್ಯರಸ್ತೆಗಳಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಲು ಟೋಯಿಂಗ್‌ ಕ್ರಮ ಮತ್ತೆ ಜಾರಿಯಾಗುತ್ತಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

29 mins ago

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

40 mins ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

53 mins ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

1 hour ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

1 hour ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

1 hour ago