ರಾಜ್ಯ

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್ ಸಿನಿಮಾ ಪ್ರೇಮಿಗಳನ್ನು ಒಂದೇ ಬಾರಿಗೆ ಆಕರ್ಷಿಸಿದ್ದು, ಕೆವಿಎಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಟಾಕ್ಸಿಕ್‌ ಟೀಸರ್‌ ರಿಲೀಸ್‌ ಆಗಿದೆ.

ಯಶ್ ಅವರ ಭಯಂಕರ ರಾಯ ಪಾತ್ರವು ಭಾರಿ ಸದ್ದು ಮಾಡುತ್ತಿದೆ. “ಇಟ್ಸ್ ಓವರ್ ವೆನ್ ಐ ಸೇ ಇಟ್ಸ್ ಓವರ್… ಟಿಲ್ ದೆನ್ ಹ್ಯಾವ್ ಸಮ್ ಮ್ಯಾನರ್ಸ್” ಎಂಬ ಡೈಲಾಗ್ ಜೊತೆಗೆ ಯಶ್ ಅವರ ಫಿಯರ್ಸ್ ಅವತಾರವು ಫ್ಯಾನ್ಸ್‌ನಲ್ಲಿ ‘ಡ್ಯಾಡಿ ಇಸ್ ಹೋಮ್’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಹೊಸ ಅಲೆಯನ್ನೇ ಸೃಷ್ಟಿಸಿದೆ.

ಟೀಸರ್‌ನಲ್ಲಿ ಯಶ್ ರಾಯನಾಗಿ ಗ್ಯಾಂಗ್‌ಸ್ಟರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿಗಾರ್ ಹೊಗೆಯುತ್ತಾ, ರಾಯಲ್ ಸರ್ಕಸ್, ಗಾಳಿ, ಹಿಮ ಮತ್ತು ವಿವಿಧ ಸ್ಥಳಗಳಲ್ಲಿ ನಡೆಯುವ ಭಾರಿ ಆಕ್ಷನ್ ಸೀಕ್ವೆನ್ಸ್‌ಗಳು ಕಣ್ಣು ಕೊರೆಯುತ್ತವೆ. ಪಾರ್ಟಿ ಸೀನ್‌ನಿಂದ ಆರಂಭವಾಗುವ ಟೀಸರ್ ರಕ್ತದ ಹೊಳೆ, ಚೈನ್ ಸಾ ದೃಶ್ಯಗಳೊಂದಿಗೆ ಕೊನೆಗೊಳ್ಳುತ್ತದೆ. ಯಶ್ ಯುವಕ ಲುಕ್‌ನಲ್ಲೂ ಕಾಣಿಸಿಕೊಂಡಿದ್ದು, ಎರಡು ಶೇಡ್‌ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಪ್ಯಾನ್ ಇಂಡಿಯಾ ಚಿತ್ರವನ್ನು ಯಶ್ ಸಹ-ರಚನೆ ಮಾಡಿದ್ದಾರೆ. KVN ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರವು ಗೋವಾ ಹಿನ್ನೆಲೆಯಲ್ಲಿ 1940-70ರ ಅವಧಿಯ ಮಾಫಿಯಾ, ವಿಶ್ವಾಸಘಾತುಕತೆ ಮತ್ತು ಅಪರಾಧ ಜಗತ್ತನ್ನು ಚಿತ್ರಿಸುತ್ತದೆ. ಯಶ್ ಅವರೇ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ಚಿತ್ರವನ್ನು ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಏಕಕಾಲದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂತರ ಇತರ ಭಾಷೆಗಳಿಗೆ ಡಬ್ಬಿಂಗ್ ಮಾಡಲಾಗಿದೆ.

ಪಂಚ ನಟಿಯರ ಬ್ರಿಗೇಡ್
ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಸ್ಟಾರ್ ಕ್ಯಾಸ್ಟ್ ಚಿತ್ರಕ್ಕೆ ಹೆಚ್ಚಿನ ಆಕರ್ಷಣೆ ನೀಡಿದೆ.

ಮಾರ್ಚ್ 19 ರಿಲೀಸ್ : ಫೆಸ್ಟಿವಲ್ ಬೂಮ್
ಟಾಕ್ಸಿಕ್ ಚಿತ್ರವು ಮಾರ್ಚ್ 19, 2026ರಂದು ಯುಗಾದಿ ಹಬ್ಬದ ದಿನದಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬಿಡುಗಡೆಯಾಗುತ್ತದೆ. ಇದೇ ದಿನ ರಣವೀರ್ ಸಿಂಗ್ ಅಭಿನಯದ ಧುರಂದರ್ 2 ಚಿತ್ರವೂ ಬಿಡುಗಡೆಯಾಗುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸ್ಪರ್ಧೆ ತೀವ್ರವಾಗುವ ಸಾಧ್ಯತೆ ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

36 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

37 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

39 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

42 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

47 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

55 mins ago