ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ.
ಖಾಸಗಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ಹೆಚ್ಚು ವಾಹನ ದಟ್ಟಣೆ ಹೊಂದಿರುವ ನಗರಗಳ ಪೈಕಿ ಐಟಿಬಿಟಿ ಸಿಟಿ ಬೆಂಗಳೂರು ಎರಡನೇ ಸ್ಥಾನ ಪಡೆದುಕೊಂಡಿದೆ.
ವರದಿ ಪ್ರಕಾರ 2025 ರ ವಾರ್ಷಿಕ ಟ್ರಾಫಿಕ್ ಇಂಡೆಕ್ಸ್ ವರದಿ ಆಧರಿಸಿ ಬೆಂಗಳೂರಿಗೆ ವಿಶ್ವದ ನಗರಗಳಲ್ಲಿ 2ನೇ ಸ್ಥಾನ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯೂ ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗಿದ್ದು. ನಿರೀಕ್ಷೆಗೂ ಮೀರಿ ವಾಹನ ನೋಂದಣಿ ಆಗ್ತಿರೋದೇ ಟ್ರಾಫಿಕ್ ಸಮಸ್ಯೆಗೆ ಕಾರಣ ಅನ್ನೋದು ಕಂಡುಬಂದಿದೆ.
ನಗರದಲ್ಲಿ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಬಳಕೆ ದ್ವಿಗುಣಗೊಳ್ಳುತ್ತಿರುವುದರ ನಡುವೆಯೂ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ವಿಶ್ವದಲ್ಲೇ ಅತಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವ ನಗರಗಳಲ್ಲಿ ಮೊದಲ ಸ್ಥಾನ ಮೆಕ್ಸಿಕೋ ಸಿಟಿಗೆ ಬಂದಿದ್ದರೆ, ಎರಡನೇ ಸ್ಥಾನ ಬೆಂಗಳೂರು ಇದೆ, ಮೂರನೇ ಸ್ಥಾನ ಡಬ್ಲಿನ್ (ಐಲೆರ್ಂಡ್) ಇದೆ.
ಭಾರತದ ಇತರ ನಗರಗಳಲ್ಲಿ ಪುಣೆ 5ನೇ ಸ್ಥಾನ, ಮುಂಬೈ 18ನೇ ಸ್ಥಾನ, ನವದೆಹಲಿ 23ನೇ ಸ್ಥಾನ, ಕೋಲ್ಕತ್ತ 29ನೇ ಸ್ಥಾನ ಪಡೆದುಕೊಂಡಿವೆ.
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…